ಎಚ್.ನರಸಿಂಹಯ್ಯ
ಗೋಚರ
ಗಾಂಧೀವಾದಿ, ವಿಚಾರವಾದಿ ಡಾ. ಎಚ್. ನರಸಿಂಹಯ್ಯ(ಜೂನ್ ೬, ೧೯೨೦ - ಜನವರಿ ೩೧, ೨೦೦೫) ಅವರು ಬೆಂಗಳೂರು|ಬೆಂಗಳೂರಿನ ಹೆಸರಾಂತ ಭೌತಶಾಸ್ತ್ರಜ್ಞರೂ, ಶಿಕ್ಷಣತಜ್ಞರೂ ಆಗಿದ್ದರು. ಇವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂದೆ ಅಮೇರಿಕ ದೇಶದಲ್ಲಿನ ಓಹಿಯೋ ವಿಶ್ವವಿದ್ಯಾಲಯದಲ್ಲಿ [[ಪರಮಾಣು ಭೌತಶಾಸ್ತ್ರ|ಪರಮಾಣು ಭೌತಶಾಸ್ತ್ರದಲ್ಲಿ ಪಿಎಚ್.ಡಿ. ಪದವಿಯನ್ನು ಪಡೆದರು. ನ್ಯಾಷನಲ್ ಕಾಲೇಜು, ಬೆಂಗಳೂರಿನಲ್ಲಿ ಭೌತಶಾಸ್ತ್ರದ ಅಧ್ಯಾಪಕರಾಗಿ ಸೇರಿಕೊಂಡ ಇವರು, ತದನಂತರ ಕಾಲೇಜಿನ ಪ್ರಾಂಶುಪಾಲರಾದರು. ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳೂ ಆಗಿದ್ದರು.
ನುಡಿಗಳು
[ಸಂಪಾದಿಸಿ]- ವಿದ್ಯಾವಂತ ಮೂಢ ನಂಬಿಕಸ್ಥನು ಅವಿದ್ಯಾವಂತ ಮೂಢ ನಂಬಿಕಸ್ಥನಿಗಿಂತ ಹೆಚ್ಚು ಅಪಾಯಕಾರಿ.
-೯ ಜುಲೈ ೨೦೨೫ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.