ಜಿ.ಪಿ. ರಾಜರತ್ನಂ
ಜಿ.ಪಿ. ರಾಜರತ್ನಂ ಜನನ, 5 ಡಿಸೇಂಬರ್ 1909 . ಮರಣ ೧೯೭೯. ಇವರು ಮೂಲತಃ ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯವರು. ಇವರ ಪೂರ್ವಜರು ತಮಿಳುನಾಡಿನ "ನಾಗಪಟ್ಟಣ"ಕ್ಕೆ ಸೇರಿದ ತಿರುಕ್ಕಣ್ಣಾಪುರ ಎಂಬ ಅಗ್ರಹಾರದಿಂದ ೧೯೦೬ ರಲ್ಲಿ ಮೈಸೂರಿಗೆ ಬಂದರು. ಹೆಸರಾಂತ ಗುಂಡ್ಲು ಪಂಡಿತ ವಂಶ ದಲ್ಲಿ ಡಿಸೆಂಬರ್ ೦೫, ೧೯೦೯ರಂದು ರಾಮನಗರದಲ್ಲಿ ಜನಿಸಿದರು. ಮೊದಲಿಗೆ ಇವರ ಹೆಸರು ಜಿ.ಪಿ.ರಾಜಯ್ಯಂಗಾರ್ ಎಂದಿತ್ತು. ಇವರು ಲೋಯರ್ ಸೆಕೆಂಡರಿ ಓದುತ್ತಿದ್ದಾಗ ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು ಜಿ.ಪಿ.ರಾಜರತ್ನಂ ಎಂದು ತಿದ್ದಿಕೊಂಡಿದ್ದರು. ತಂದೆ ಆ ಭಾಗದಲ್ಲಿ ಉತ್ತಮ ಶಿಕ್ಷಕರೆಂದು ಹೆಸರು ಮಾಡಿದ್ದ ಜಿ.ಪಿ.ಗೋಪಾಲಕೃಷ್ಣ ಅಯ್ಯಂಗಾರ್. ತಾಯಿಯ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ, ತಂದೆಯೇ ಎಲ್ಲವೂ ಆಗಿದ್ದರು. ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ (೧೯೩೧ರಲ್ಲಿ) ರಾಜರತ್ನಂ ಎಂ.ಎ (ಕನ್ನಡ)ದಲ್ಲಿ ಮುಗಿಸಿ, ಶಿಶು ವಿಹಾರ ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ ತುತ್ತೂರಿ ಶಿಶುಗೀತೆ ಸಂಕಲನ. ಕ್ರಮೇಣ ಆ ಕೆಲಸ ತೃಪ್ತವಾಗದೆ ಹೈದರಾಬಾದಿಗೂ ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ ಬೆಂಗಳೂರಿಗೆ ಬಂದು ಜನಗಣತಿ ಕಛೇರಿಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರು ರಾಜರತ್ನಂರವರಿಗೆ 'ಸಾಹಿತ್ಯ ಸೇವೆ' ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ 'ರಾಜರತ್ನಂ' ಅವರಿಂದ 'ಉತ್ತಮ ಸಾಹಿತ್ಯ ನಿರ್ಮಾಣ'ಕ್ಕೆ ದಾರಿಯಾಯಿತು. ಬೌದ್ಧ ಸಾಹಿತ್ಯ ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು 'ಮಿಂಚು'.
- ನಾವಾಗಿ ಯುದ್ಧಕ್ಕೆ ಹೋಗುವುದು ಬೇಡ. ತಾನಾಗಿ ಬಂದು ನಮ್ಮ ಮೇಲೆ ಬಿದ್ದಲ್ಲಿ ಅದನ್ನು ಕಳೆದುಕೊಳ್ಳುವುದು ಬೇಡ. - ೦೪:೧೪, ೩ ಜನವರಿ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಬುದ್ದಿಯ ಜ್ಞಾನ ಬೇರೆ, ಹೃದಯದ ಜ್ಞಾನ ಬೇರೆ.
- ಲೋಕದಲ್ಲಿ ಎಷ್ಟು ಜನರಿದ್ದಾರೋ ಅಷ್ಟು ಅನುಭವಗಳಿವೆ. ಅವುಗಳಲ್ಲಿ ಕೆಲವು ಗ್ರಾಹ್ಯವಾದವು, ಕೆಲವು ತ್ಯಾಜ್ಯ ಎಂದು ನಿರ್ಧಾರ ಮಾಡುವ ಒರೆಗಲ್ಲು ಯಾವುದು ? ಅವರವರ ಸ್ವಂತ ಅನುಭವವೆ !
- ನಿನ್ನ ಕೆಲಸಗಳನ್ನು ನೀನು ಮಾಡುತ್ತ ಹೋಗು. ಆಗ ಜಗತ್ತೇ ನಿನ್ನನ್ನು ಅನುಕರಿಸುತ್ತದೆ.ಜಗತ್ತನ್ನು ನೀನು ಅನುಕರಿಸಲು ಹೋಗಬೇಡ ಅದರಲ್ಲಿ ಸ್ವಂತಿಕೆ ಇರುವುದಿಲ್ಲ.
-೯ ಫೆಬ್ರವರಿ ೨೦೨೫ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.