ವಿಷಯಕ್ಕೆ ಹೋಗು

ಟಿ.ಪಿ.ಕೈಲಾಸಂ

ವಿಕಿಕೋಟ್ದಿಂದ

ತ್ಯಾಗರಾಜ ಪರಮಶಿವ ಕೈಲಾಸಂ ಟಿ.ಪಿ.ಕೈಲಾಸಂ ಇವರು ಕನ್ನಡ ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಆಧುನಿಕ ರಂಗಭೂಮಿಯ ಹರಿಕಾರರೆಂದೇ ಕರೆಯಲ್ಪಟ್ಟ ಇ‌ವರ ಹಾಸ್ಯ ಚಟಾಕಿಗಳು ಇಂದಿಗೂ ಜನರನ್ನು ನಗಿಸುತ್ತಾ ನಲಿಸುತ್ತಾ ಇವೆ. ಕನ್ನಡ ರಂಗಭೂಮಿಯನ್ನು ಸಾಂಪ್ರದಾಯಿಕತೆಯ ಸಂಕೋಲೆಗಳಿಂದ ಹೊರಗೆಳೆದು ತಂದು ಅದಕ್ಕೆ ಹೊಸ ತಿರುವನ್ನು ಆಯಾಮಗಳನ್ನು ತಂದು ಕೊಟ್ಟ ಹಿರಿಮೆ ಅವರದು.

  • ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ.
  • ಪಾಪವನ್ನು ತಿರಸ್ಕರಿಸು, ಪಾಪಿಯನ್ನಲ್ಲ.