ವಿಷಯಕ್ಕೆ ಹೋಗು

ತ್ರಿವೇಣಿ

ವಿಕಿಕೋಟ್ದಿಂದ

ಅನಸೂಯ ಶಂಕರ್, ತ್ರಿವೇಣಿ ಎಂಬ ಬರಹನಾಮದಿಂದ ಪ್ರಸಿದ್ಧರಾದವರು ಅನಸೂಯ ಶಂಕರ್. ಇವರು ಕನ್ನಡದ ಪ್ರಮುಖ ಕಾದಂಬರಿಕಾರರಲ್ಲೊಬ್ಬರು. ಹಲವಾರು ಜನಪ್ರಿಯ ಕಾದಂಬರಿಗಳಿಂದ ಪ್ರಸಿದ್ಧಿಯಾಗಿದ್ದಾರೆ. ಕನ್ನಡ ಸಾಹಿತ್ಯದ ಪ್ರಮುಖ ಬರಹಗಾರ್ತಿಯಾಗಿ ಗುರುತಿಸಲ್ಪಟ್ಟಿದ್ದಾರೆ. ತ್ರಿವೇಣಿಯವರು ಸೆಪ್ಟಂಬರ್ ೧, ೧೯೨೮ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ.ಎಮ್.ಕೃಷ್ಣಸ್ವಾಮಿ ಪ್ರಸಿದ್ಧ ವಕೀಲರು, ತಾಯಿ ತಂಗಮ್ಮ. ಇವರ ಹೈಸ್ಕೂಲ್‍ವರೆಗಿನ ಶಿಕ್ಷಣ ಮಂಡ್ಯದಲ್ಲಿ ಆಯಿತು. ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. ೧೯೪೭ರಲ್ಲಿ ಮಹಾರಾಣಿ ಕಾಲೇಜಿನಿಂದ ಮನಃಶಾಸ್ತ್ರದಲ್ಲಿ ಸಿದ್ದೇಗೌಡ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು. ನಂತರ ಮೈಸೂರಿನಿಂದ ಮಂಡ್ಯಕ್ಕೆ ಬಂದು ಅಲ್ಲಿ ಪ್ರೌಢಶಾಲೆಯಲ್ಲಿ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದರು. ಕನ್ನಡದ ಕಣ್ವ ಬಿ.ಎಂ.ಶ್ರೀಯವರು ಇವರ ದೊಡ್ಡಪ್ಪ. ಹೆಸರಾಂತ ಕಾದಂಬರಿಗಾರ್ತಿ ಆರ್ಯಾಂಬಾ ಪಟ್ಟಾಭಿ ಇವರ ತಂಗಿ. ಮತ್ತೊಬ್ಬ ಪ್ರಸಿದ್ಧ ಕಾದಂಬರಿಗಾರ್ತಿ 'ವಾಣಿ' (ಬಿ.ಎಸ್.ಸುಬ್ಬಮ್ಮ) ಇವರ ಚಿಕ್ಕಮ್ಮ. ಉತ್ತಮ ಕತೆಗಾರ 'ಅಶ್ವತ್ಥ' ರವರು ತ್ರಿವೇಣಿಯವರ ಪತಿಯ ಭಾವ. ಹೀಗೆ ಹತ್ತಿರದ ಬಂಧುಗಳು ಕನ್ನಡ ಸಾಹಿತ್ಯದಲ್ಲಿ ಹೆಸರು ಮಾಡಿದವರು. ತ್ರಿವೇಣಿಯವರ ವಿವಾಹ ೧೯೫೦ರಲ್ಲಿ ಮೈಸೂರಿನ ಶಾರದಾವಿಲಾಸ ಮಹಾವಿದ್ಯಾಲಯದ ಇಂಗ್ಲಿಷ್ ಪ್ರಾಧ್ಯಾಪಕ ಎನ್. ಶಂಕರ್ ಅವರೊಡನೆ ಆಯಿತು. ಅವರು ಇವರ ಬರವಣಿಗೆಗೆ ಪ್ರೋತ್ಸಾಹ ಕೊಟ್ಟರಲ್ಲದೆ, ಇವರು ಅಧ್ಯಾಪಕ ವೃತ್ತಿಗೆ ರಾಜಿನಾಮೆ ಕೊಟ್ಟು ಬರವಣಿಗೆಯನ್ನು ಮುಂದುವರಿಸಿದರು.

  • ರೂಪ ಕಣ್ಣುಗಳಿಗೆ ಸೀಮಿತ, ಗುಣ ಆತ್ಮದವರೆಗೆ ತಲುಪುವ ಸಾಧನ. - ೦೭:೩೭, ೧೨ ಫೆಬ್ರುವರಿ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ರೂಪ, ಕಣ್ಣುಗಳಿಗೆ ಸೀಮಿತ. ಗುಣ, ಆತ್ಮದವರೆಗೆ ತಲುಪುವ ಸಾಧನ. ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
w
w
ವಿಕಿಪೀಡಿಯದಲ್ಲಿ ಇದರ ಬಗ್ಗೆ ಒಂದು ಲೇಖನವಿದೆ: