ಬಿ ಎಂ ಶ್ರೀಕಂಠಯ್ಯ
ಗೋಚರ
ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ ಸ್ಥಾನ-ಮಾನಗಳಿರಲಿಲ್ಲ. ಅಂತಹ ಸಮಯದಲ್ಲಿ ಕನ್ನಡವನ್ನು ಅದಕ್ಕಿರುವ ಒಂದು ನ್ಯಾಯವಾದ ಸ್ಥಾನವನ್ನು ದೊರಕಿಸಿ ಕೊಡಲೇಬೇಕು ಎಂದು ಆಶಿಸಿ, ತಮ್ಮ ಜೀವನವನ್ನು ಕನ್ನಡಕ್ಕಾಗಿ ಮುಡಿಪಾಗಿಟ್ಟವರು ಬಿ. ಎಂ. ಶ್ರೀಕಂಠಯ್ಯನವರು. ಧಾರವಾಡದಲ್ಲಿ ೧೯೧೧ ರಲ್ಲಿ ಶ್ರೀ ಯವರು ಕನ್ನಡ ಮಾತು ತಲೆಯೆತ್ತುವ ಬಗ್ಗೆ ಎಂಬ ಯುಗ ಪ್ರವರ್ತಕ ಕನ್ನಡ ಭಾಷಣವನ್ನು ಮಾಡಿದರು. ಜನವಾಣಿ ಬೇರು ಕವಿವಾಣಿ ಹೂವು ಎಂದು ಗರತಿಯ ಹಾಡುಗಳು ಕೃತಿಯ ಮುನ್ನುಡಿಯಲ್ಲಿ ಪ್ರಸಿದ್ಧಿ ಹೇಳಿಕೆ ಇದೆ.
- ಲೋಕವೆಲ್ಲಾ ಬಗ್ಗುವುದು ಶ್ರೇಷ್ಠವಾದ ಬುದ್ದಿಗೆ ತಾನೇ ?
- ಜ್ಞಾನಕ್ಕೆ ವಿದ್ಯೆಯೂ , ವಿದ್ಯೆಗೆ ಓದು ಬರಹವೂ ತಳಹದಿ .[೧]
- ಜನರಿಗೆ ಹಿರಿಯರಿಂದ ಬರುವ ಒಡವೆಗಳಲ್ಲಿ ಭಾಷೆಯೂ ಒಂದು. ಅದು ಚೆನ್ನಾಗಿದ್ದಷ್ಟೂ ಭೂಷಣ. ೨ ಡಿಸೆಂಬರ್ ೨೦೧೬ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.