ವಿಷಯಕ್ಕೆ ಹೋಗು

ಹೆಚ್.ಡಿ.ದೇವೇಗೌಡ

ವಿಕಿಕೋಟ್ದಿಂದ

ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ ಇವರು ಭಾರತದ ೧೨ನೆಯ ಪ್ರಧಾನಿಯಾಗಿದ್ದರು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ಮಣ್ಣಿನ ಮಗ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು. ದೇವೇಗೌಡರು ಮೇ ೧೮, ೧೯೩೩ ರಂದು ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪಡೆದ ಬಳಿಕ, ದೇವೇಗೌಡ ಅವರು ಹಾಸನ ತಾಲ್ಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರನ್ನು ೧೯೫೪ರಲ್ಲಿ ವಿವಾಹವಾದರು. ಅವರಿಗೆ ಎಚ್.ಡಿ. ಕುಮಾರಸ್ವಾಮಿ ಹಾಗೂ ಎಚ್.ಡಿ. ರೇವಣ್ಣ ಸೇರಿದಂತೆ ನಾಲ್ಕು ಜನ ಗಂಡು ಮಕ್ಕಳೂ, ಇಬ್ಬರು ಹೆಣ್ಣು ಮಕ್ಕಳೂ ಇದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದರು. ಎಚ್.ಡಿ. ರೇವಣ್ಣ ಅವರು ಕರ್ನಾಟಕ ಸರ್ಕಾರದಲ್ಲಿ ಮಂತ್ರಿಗಳಾಗಿದ್ದರು. ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಅವರು ದೇವೇಗೌಡರ ಅಳಿಯ. ರಾಜಕೀಯದಲ್ಲಿ ರಾಮಕೃಷ್ಣ ಹೆಗಡೆ ಯವರನ್ನು ಮಿತ್ರರನ್ನಾಗಿಸಿ ಕೊಂಡರು. ೧೯೯೬ ರಲ್ಲಿ ಯಾವ ಒಂದು ರಾಜಕೀಯ ಪಕ್ಷಕ್ಕೂ ಲೋಕಸಭೆಯಲ್ಲಿ ಸ್ಪಷ್ಟ ಬಹುಮತವಿರಲಿಲ್ಲ. ಆಗ ಯುನೈಟೆಡ್ ಫ್ರಂಟ್ (ಕಾಂಗ್ರೆಸ್ ಹೊರತು ಮತ್ತು ಬಿಜೆಪಿ ಹೊರತುಪಡಿಸಿದ ಪ್ರಾದೇಶಿಕ ಪಕ್ಷಗಳ ಒಂದು ಸಂಘ) ಕಾಂಗ್ರೆಸ್ ಬೆಂಬಲದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ನಿರ್ಧರಿಸಿದರು. ಅನಿರೀಕ್ಷಿತವಾಗಿ, ದೇವೇಗೌಡರು ಸರ್ಕಾರದ ಮುಖ್ಯಸ್ಥರಾಗಿ ಆಯ್ಕೆಯಾದರು ಮತ್ತು ಭಾರತದ ೧೧ ನೇ ಪ್ರಧಾನಿಯಾದರು. ಅವರು ೧ ಜೂನ್ ೧೯೯೬ ರಂದು ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು ಮತ್ತು ೧೯೯೭ ರ ಏಪ್ರಿಲ್ ೨೧ ರವರೆಗೆ ಅಧಿಕಾರದಲ್ಲಿ ಮುಂದುವರೆದರು. ಅಲ್ಲದೆ, ಅವರು ಯುನೈಟೆಡ್ ಫ್ರಂಟ್‌ನ ಸ್ಟೀರಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ದೆಹಲಿ ಮೆಟ್ರೋ ಯೋಜನೆಯ ಕೀರ್ತಿ ಅವರು ಸಲ್ಲುತ್ತದೆ. ನಂತರದ ವರ್ಷಗಳಲ್ಲಿ ಜಾತ್ಯತೀತ ಜನತಾ ದಳದ ರಾಷ್ಟ್ರಾಧ್ಯಕ್ಷರಾಗಿದ್ದಾರೆ.

ಉಲ್ಲೇಖಗಳು

[ಸಂಪಾದಿಸಿ]

೧. http://kla.kar.nic.in/assembly/review/previousleaderofopposition.htm
೨. https://www.pmindia.gov.in/en/former_pm/shri-h-d-deve-gowda/